80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಜವಾಬ್ದಾರಿಯಿಂದ ತಮಗೆ ವಿನಾಯಿತಿ ನೀಡುವಂತೆ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.
ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕಾರಣ ನೀಡಿರುವ ಅವರ ಮನವಿಯನ್ನು ಪುರಸ್ಕರಿಸಲಾಗಿದ್ದು, ಜಮೀರ್ ಬದಲಿಗೆ ಉಡುಪಿಗೆ ಸಚಿವ ರಿಜ್ವಾನ್ ಅರ್ಷದ್ ಹಾಗೂ ವಿಜಯನಗರಕ್ಕೆ ಸಚಿವ ಬಸವಂತಪ್ಪ ಅವರನ್ನು ನಿಯೋಜಿಸಿ ಹೊಸ ಆದೇಶ ಹೊರಡಿಸಲಾಗಿದೆ.

