ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರ ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಕಾಮತ್‌

ಬೆಂಗಳೂರು:  ದಕ್ಷಿಣಕನ್ನಡ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ.ವೇದವ್ಯಾಸ್‌ ಕಾಮತ್‌ ಅವರು ವಿಶೇಷ ಗಮನ ಸೆಳೆದರು.

ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಹ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದ್ದು, ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಸದನದ ಗಮನ ಸೆಳೆದರು.

ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿರುವ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.

ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಕೂಡ ಸಿಆರ್‌ಝಡ್‌ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳುಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.

ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಪೇಕ್ಷಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಮಾನ್ಯ ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಪೇಕ್ಷಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆಯ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

Ramya Bolantoor

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago