News Karnataka Kannada
Friday, May 03 2024
ಬೆಂಗಳೂರು

ಕಲಾಪಕ್ಕೆ ನಿಗದಿತ ಸಮಯಕ್ಕೆ ಆಗಮಿಸುವ ಶಾಸಕರಿಗೆ ಬಹುಮಾನ

MlAs who arrive at the scheduled time for the proceedings will be rewarded
Photo Credit : News Kannada

ಬೆಂಗಳೂರು: ಹೊಸದಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಆಯೋಜನೆ ಮೂಲಕ ಮನಗೆದ್ದಿದ್ದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಈಗ ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರೊಬ್ಬರು, ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು