ಬೆಂಗಳೂರು: ನೈರುತ್ಯ ಮಾನ್ಸೂನ್ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆಗಸ್ಟ್ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಜತೆಗೆ ಥಂಡಿ ವಾತಾವರಣ ಇರಲಿದೆ.
Ad