ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಸೇಡಿನಿಂದ ನಡೆಸಲ್ಪಟ್ಟಿದೆ, ಇದಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ  ಕಾರಣ ಈ ಕೂಡಲೇ ಇಬ್ಬರೂ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣ ರಾಜಕೀಯ ಸೇಡಿನ ಮನೋಭಾವದಿಂದಲೇ ಮುಂದುವರಿಸಲಾಗುತ್ತಿದೆ. ಕಾಂಗ್ರೆಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಪಕ್ಷಪಾತದ ಉದ್ದೇಶದಿಂದಲೇ ಈ ಪ್ರಕರಣ ದಾಖಲಿಸಲಾಗಿದೆ ಎಂದು ಬಿಜೆಪಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಇದರ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.