Bengaluru 22°C
Ad

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Pm Hdd

ಬೆಂಗಳೂರು: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಟ್ವೀಟ್​ ಮಾಡಿದ್ದರು.

ಈ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಹೆಚ್​ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು.

ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ” ಎಂದು ಟ್ವೀಟ್​ ಮಾಡಿದ್ದಾರೆ. ಜೂನ್​ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಭಾಗಿಯಾಗಲಿಲ್ಲ. ಈ ಕುರಿತು ಟ್ವೀಟ್​ ಮಾಡಿದ ಹೆಚ್​​ಡಿ ದೇವೇಗೌಡ “ಜೂನ್​ 9 ರಂದು ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ. ಆದರೆ ನಾನು ಟಿವಿಯಲ್ಲಿ ಸಮಾರಂಭವನ್ನು ನೋಡಿದ್ದೇನೆ. ಕಾಂಗ್ರೆಸ್ ಏನೇ ಹೇಳಿದರೂ ಭಾರತೀಯ ಪ್ರಜಾಪ್ರಭುತ್ವ ಸದೃಢವಾಗಿದೆ” ಎಂದು ಹೆಚ್​ಡಿ ದೇವೇಗೌಡ ಜೂನ್​9 ರಂದು ಟ್ವೀಟ್​ ಮಾಡಿದ್ದರು.

https://x.com/H_D_Devegowda/status/1800194030359498989

 

Ad
Ad
Nk Channel Final 21 09 2023
Ad