ಜನವರಿ 19ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ಅವರು ಇದೇ ಶುಕ್ರವಾರ (ಜ.19) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ದೇಶಿಸಿದ್ದು, ಪ್ರಮುಖರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜತೆಗೆ ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ, ಮೋದಿ ರೋಡ್‌ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆಗೆ ಕಾಯಲಾಗುತ್ತಿದೆ ಎನ್ನಲಾಗಿದೆ.

ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಇದೇ 19ರಂದು ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.

ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಜತೆ ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.

 

 

Ashitha S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

10 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

33 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

49 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago