ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮುಂಜಾನೆಯಿಂದಲೆ ಬಿರುಗಾಳಿಯೊಂದಿಗೆ ಮಳೆ ಅಬ್ಬರಿಸಿದ್ದು ಜನರಲ್ಲಿ ಆತಂಕ ತಂದಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

