ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ ಇರಲಿದೆ. ಮೋಂಥಾ ಚಂಡಮಾರುತದ ಎಫೆಕ್ಟ್ ಕರುನಾಡಿಗೆ ತಟ್ಟಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟು 7 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ಕೊಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಕಾರಣ ಆರೆಂಜ್ ಅಲರ್ಟ್ ಕೊಡಲಾಗಿದೆ. ಅಲ್ಲದೆ ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ, ಕೊಡಗು , ಕೋಲಾರ ಹಾಗೂ ಮೈಸೂರು ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅ-30ಕ್ಕೆ ಉ.ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಹಾಸನ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು ಭಾಗಗಳಲ್ಲಿ ಮಳೆ ಆಗಲಿದೆ.

ಹೆಚ್ಚುಕಮ್ಮಿ ಇಂದಿನಿಂದ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 2 ರ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕ್ಷೀಣಿಸಲಿದೆ.