News Karnataka Kannada
Thursday, May 02 2024
ಬೆಂಗಳೂರು

12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆ

More than 12 districts receive rainfall for two days
Photo Credit : News Kannada

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹಾಸನದಲ್ಲಿ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು