News Karnataka Kannada
Friday, May 17 2024
ಬೆಂಗಳೂರು

ರಾಜ್ಯದಲ್ಲಿ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ

Photo Credit : News Kannada

ಬೆಂಗಳೂರು:  ಕರ್ನಾಟಕದಲ್ಲಿ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು