ಬೆಂಗಳೂರು: ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ ಮುಂದುವರೆದಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರಲಿದೆ. ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.