ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 31 ರಿಂದ ಮಳೆಯಾಗುತ್ತೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.