News Karnataka Kannada
Sunday, May 12 2024
ಬೆಂಗಳೂರು

ಗ್ಯಾಸ್ ಲೀಕ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಮತ್ತು ಮಗು

New Project 2024 01 03t181545.909
Photo Credit : News Kannada

ಬೆಂಗಳೂರು:  ಗ್ಯಾಸ್ ಲೀಕ್ ಮಾಡಿ ತಾಯಿ ಮತ್ತು ಮಗು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ನಾಗೊಂಡನಹಳ್ಳಿಯ ಶ್ರಿನಿಧಿ ಅಲಯನ್ಸ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳ‌ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಗುವನ್ನ ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಡೋರ್ ಲಾಕ್​ ಮಾಡಿಕೊಂಡಿದ್ದು, ಕುಟುಂಬಸ್ಥರು ಎಷ್ಟೇ ಬಡಿದರೂ ಬಾಗಿಲನ್ನ ತೆಗೆಯದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಘಟನೆ ತಿಳಿದುಬಂದ ಕೂಡಲೇ ಕುಟುಂಬಸ್ಥರು ಅಗ್ನಿಶಾಮಕ ದಳಕ್ಕೆ ಮಾಹಿತಿ‌ ನೀಡಿದದ್ದು, ಘಟನಾ ಸ್ಥಳಕ್ಕೆ ವೈಟ್ ಪೀಲ್ಡ್ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿ ಬಾಗಿಲು ಹೊಡೆದು ತಾಯಿ ಮಗುವನ್ನ ರಕ್ಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು