Bengaluru 24°C
Ad

ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆ ಆರಂಭ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಹಾಗೂ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದಾರೆ. ದೇಶ ಬಿಟ್ಟು ಹೋಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಲು SIT ಪೊಲೀಸರು ಕಾದು ಕುಳಿತಿದ್ದಾರೆ. 

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಹಾಗೂ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದಾರೆ. ದೇಶ ಬಿಟ್ಟು ಹೋಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಲು SIT ಪೊಲೀಸರು ಕಾದು ಕುಳಿತಿದ್ದಾರೆ.

ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಇಲಾಖೆಯಿಂದ ಇಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಎಸ್‌ಐಟಿ ಪತ್ರ ಬರೆದಿತ್ತು. ಸಿಎಂ ಸಿದ್ದರಾಮಯ್ಯ ಕೂಡ ಕೇಂದ್ರ ಸರ್ಕಾರಕ್ಕೆ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಕೋರಿ ಪತ್ರ ಬರೆದಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಉತ್ತರ ಕೇಳಿ ವಿದೇಶಾಂಗ ಇಲಾಖೆಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.

ಆರೋಪ ಸ್ಥಾನದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಪಾಸ್‌ಪೋರ್ಟ್‌ ರದ್ದು ಮಾಡಲು ಅಗತ್ಯವಾದ ದಾಖಲೆಗಳನ್ನು ಎಸ್​ಐಟಿ ಟೀಮ್ ಒದಗಿಸಿತ್ತು.

ಈ ಪತ್ರ ಆಧರಿಸಿ ವಿದೇಶಾಂಗ ಇಲಾಖೆ ಸದ್ಯ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಶುರು ಮಾಡಿದೆ. ಕೇಂದ್ರ ಗೃಹ ಇಲಾಖೆ ಮಾಹಿತಿಯನ್ನು ದೃಢಪಡಿಸಿಕೊಂಡು ಪಾಸ್​ಪೋರ್ಟ್ ಆ್ಯಕ್ಟ್​​​ ಸೆಕ್ಷನ್ 10 (3)ರಡಿ ಪಾಸ್‌ಪೋರ್ಟ್‌ ರದ್ದುಗೊಳಿಸಲು ಸಿದ್ಧತೆ ನಡೆಸಿದೆ.

1967 ಸೆಕ್ಷನ್ 10(3)ರ ಪಾಸ್​ಪೋರ್ಟ್ ಆ್ಯಕ್ಟ್ ಅಡಿ ಪಾಸ್‌ಪೋರ್ಟ್‌ ರದ್ದು ಮಾಡುವ ಅವಕಾಶವಿದೆ. ಒಬ್ಬ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಇದ್ರೆ ಈ ಕಾನೂನಿನ ಅಡಿ ಪಾಸ್‌ಪೋರ್ಟ್‌ ರದ್ದು ಮಾಡಬಹುದು. ಒಬ್ಬ ವ್ಯಕ್ತಿಯ ಬಳಿ ಎರಡು ಪಾಸ್ ಪೋರ್ಟ್ ಇರಲು ಸಾಧ್ಯವಿಲ್ಲ. ಇನ್ನೊಂದು ವಾರದೊಳಗೆ ಸೆಕ್ಷನ್ 10(3) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದಿಗೆ ಅವಕಾಶವಿದೆ.

 

Ad
Ad
Nk Channel Final 21 09 2023
Ad