Ad

ಮುಡಾ ಅವ್ಯವಹಾರ ಕೇಸ್:‌ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.

ಮೈಸೂರು: ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.

Ad
300x250 2

ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪ ಹೊರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.

ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರು ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.

ಪ್ರಕರಣ ಸಂಬಂಧ ಹಲವಾರು ಅನುಮಾನಗಳು ವ್ಯಕ್ತಪಡಿಸಿದ್ದಾರೆ. ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ.

ಈಗಾಗಿ ಪ್ರಕರಣ ಸಮಗ್ರ ತನಿಖೆ ನಡೆಸಬೇಕು. 10 ದಿನಗಳ ಒಳಗೆ ಇದಕ್ಕೆ ಉತ್ತರ ಕೊಡಬೇಕು. ಇಲ್ಲವಾದರೆ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿದ್ದಾರೆ.

Ad
Ad
Nk Channel Final 21 09 2023
Ad