ಬೆಂಗಳೂರು: ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು.
ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ. ತಿರುಮಲ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಕೂಡ, ನಂದಿನಿ ತುಪ್ಪದ ಗುಣಮಟ್ಟವನ್ನು ಹೊಗಳಿದ್ದಾರೆ. ಕರ್ನಾಟಕದ ನಂದಿನಿ ತುಪ್ಪವನ್ನು ಲಡ್ಡು ತಯಾರಿಯಲ್ಲಿ ಬಳಸಲು ಮತ್ತೆ ನಿರ್ಧರಿಸಿರುವುದು ಒಳ್ಳೆಯ ಸಂಗತಿ ಎಂದಿದ್ದಾರೆ.
Ad