ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನ ಬಂಧಿಸಲಾಗಿದೆ.

ಕೋರ್ಟ್ ಸೆಪ್ಟೆಂಬರ್ 30ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸದ್ಯ ಮುನಿರತ್ನ ಇದ್ದಾರೆ.

ಶಾಸಕ ಮುನಿರತ್ನ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು 82ನೇ ಸಿಹೆಚ್‌ಹೆಚ್‌ ಕೋರ್ಟ್‌ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ನ್ಯಾಯಾಧೀಶ ಗಜಾನನ ಭಟ್ ನಡೆಸಿದರು. ವಾದ, ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯ ಆದೇಶವನ್ನು ಸೆಪ್ಟೆಂಬರ್ 19ರ ಗುರುವಾರಕ್ಕೆ ಕಾಯ್ದಿರಿಸಿದರು. ಮಂಗಳವಾರಕ್ಕೆ ಮುನಿರತ್ನ ಎರಡು ದಿನದ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಅವರನ್ನು ಸೆಪ್ಟೆಂಬರ್ 30ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.