ಬೆಂಗಳೂರು : ಜಾತಿ ನಿಂದನೆ, ಜೀವ ಬೆದರಿಕೆ ಆರೋಪದಡಿ ಪೊಲೀಸರ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಇದೀಗ ಜಯದೇವ ಆಸ್ಪತ್ರೆಗೆ ಪೊಲೀಸರು ಶಿಫ್ಟ್ ಮಾಡಿದ್ದು, ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು. ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಆಡಿಯೋ ವೈರಲ್ ಆದ ಬೆನ್ನಲ್ಲೇ ಮುನಿರತ್ನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.
ಬಳಿಕ ಜಡ್ಜ್ ಮುಂದೆ ಹಾಜರು ಪಡಿಸಿದ್ದಾಗ, ತಮಗೆ ಹೃದಯ ಸಂಬಂಧಿ, ಹರ್ನಿಯಾ, ಡಯಾಬಿಟಿಸ್ ಸಮಸ್ಯೆ ಇದೆ ಎಂದು ಹೇಳಿದ್ದರು. ಅದರಂತೆಯೇ ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ಮುನಿರತ್ನಗೆ ಅನಾರೋಗ್ಯವಿದೆ ಎಂದು ವೈದ್ಯರು ರಿಪೋರ್ಟ್ ಕೊಟ್ಟಿದ್ದರು.
Ad