ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಕೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ. 2025-26ನೇ ಸಾಲಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು.
ಇದನ್ನು ಪ್ರಶ್ನಿಸಿ ಅನಿಕೇತ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪುತ್ರಿಗೆ ಎಲ್ಕೆಜಿಗೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ.
ಇದರ ಹಿಂದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ. ತಜ್ಞರ ವರದಿ ಆಧರಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.