News Karnataka Kannada
Wednesday, May 01 2024
ಬೆಂಗಳೂರು

ಮೈಸೂರು – ಬೆಂಗಳೂರು ದಶಪಥ ಟೋಲ್ ದರ ಮತ್ತೆ ಏರಿಕೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‌ ದರ ಎಪ್ರಿಲ್‌ 1ರಿಂದ ಮತ್ತೆ ಹೆಚ್ಚಳವಾಗಲಿದೆ. ಕರಾವಳಿಯಲ್ಲಿನ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು, ಕೇರಳ-ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ.
Photo Credit : Pixabay

ಬೆಂಗಳೂರು: ಮೈಸೂರು ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿದೆ. ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ.

ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ. ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ 220 ರೂ.ನಿಂದ 270ಕ್ಕೆ ಏರಿಕೆ(50ರೂ ಹೆಚ್ಚಳ). ಟ್ರಕ್‌, ಬಸ್, 2 ಆಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ).ಭಾರಿ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ಎಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು