ಬೆಂಗಳೂರು: ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಜರುಗಿದೆ.

ದೊಡ್ಡನಲ್ಲಾಳ ಗ್ರಾಮದ ಪವನ್ ( 19 ) ಮೃತ ಯುವಕ. ಮನೆಯಲ್ಲಿ ನಾಡಬಾಂಬ್ ಸುತ್ತುವಾಗ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರ ಛಿದ್ರವಾಗಿದೆ ಎಂದು ತಿಳಿದುಬಂದಿದೆ.

ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.