ಬೆಂಗಳೂರು : ವಾಲ್ಮಿಕಿ ನಿಗಮ ಹಗರಣ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿಲಾಗಿದ್ದು ಇದೀಗ ಅವರಿಗೆ ಖೈದಿ ನಂಬರ್‌ ಕೂಡ ನೀಡಲಾಗಿದೆ.ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಂಗ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. ಈ ವೇಳೆ ವಿಚಾರಣಾಧೀನ ಕೈದಿ ಸಂಖ್ಯೆ 7140 ಅನ್ನು ಅವರಿಗೆ ನೀಡಲಾಗಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ.

ಸೋಮವಾರ ತಮ್ಮ ವಶದಲ್ಲಿರುವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿ ಗಳು ನಾಗೇಂದ್ರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇಡಿ ಅಧಿಕಾರಿಗಳು ಮತ್ತೆ ತಮ್ಮ ವಶಕ್ಕೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಯಿತು.