News Karnataka Kannada
Monday, April 22 2024
Cricket
ಬೆಂಗಳೂರು

ಪ್ರಯಾಣಿಕರಿಗೆ ನಮ್ಮ ಮೆಟ್ರೊ ಕಡೆಯಿಂದ ಗುಡ್‌ನ್ಯೂಸ್‌

Metro
Photo Credit : News Kannada

ಬೆಂಗಳೂರು: ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ಬೆಂಗಳೂರು ಮೆಟ್ರೊ ರೈಲು ನಿಗಮ ಗುಡ್ ನ್ಯೂಸ್​ ನೀಡಿದೆ. ಬೆಳಗ್ಗಿನ ಪೀಕ್‌ ಅವರ್ಸ್‌ ಗಳಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೊ ವ್ಯವಸ್ಥೆ ಮಾಡಿದೆ.

ಇದರಿಂದಾಗಿ ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ಅನುಕೂಲವಾಗಿದೆ. ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರವರೆಗೆ ಈ ವ್ಯವಸ್ಥೆ ಮಾಡಲಾಗಿದೆ. ಮುಂಜಾನೆ ತಮ್ಮ ಕೆಲಸಕ್ಕೆ ಹೋಗಿ ಬರುವವರಿಗೆ ಹೆಚ್ಚುವರಿ ಸೇವೆ ಒದಗಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಿದೆ. ಬೈಯಪ್ಪನಹಳ್ಳಿಯಿಂದ‌ ಕೆಆರ್​ ಪುರಗೆ ಮೆಟ್ರೋ ಸಂಪರ್ಕವಾದ ಮೇಲೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಇದರಿಂದಾಗ ಒಡಾಟಕ್ಕೆ ತೊಂದರೆ ಉಂಟಾಗಿತ್ತು. ಈ ಕಾರಣ ಹೆಚ್ಚುವರಿ ಮೆಟ್ರೋ ಬಿಡಿ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ​ಗೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದರು. ಅದರ ಫಲಪ್ರದವಾಗಿ ಸೋಮವಾರದಿಂದ ಬೆಳಿಗ್ಗೆ ಪೀಕ್‌ ಅವರ್ಸ್‌ ಗಳಲ್ಲಿ 3 ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸುವುದಾಗಿ ನಮ್ಮ ಮೆಟ್ರೊ ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು