Bengaluru 21°C
Ad

ನಂದಿನಿ ಹಾಲಿನ ದರ ಹೆಚ್ಚಳ : ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ನೀಡಿದ್ದಾರೆ.

ರಾಮನಗರ: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ನೀಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು.

ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರವನ್ನು ಜೂನ್‌ 25 ರಂದು ಏರಿಕೆ ಮಾಡಿತ್ತು. ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಿಸಿತ್ತು.

ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನ 2 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿತ್ತು. ಇದರ ಜೊತೆ ಪ್ಯಾಕೆಟ್‌ ಗಾತ್ರವನ್ನು ದೊಡ್ಡದು ಮಾಡಿತ್ತು.1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲನ್ನು 1,050 ಎಂಎಲ್‌, ಅರ್ಧ ಲೀಟರ್‌ ಪ್ಯಾಕೆಟ್‌ ಅನ್ನು 550 ಎಂಎಲ್‌ ಹಾಲು ಸಿಗುವಂತೆ ಗಾತ್ರವನ್ನು ದೊಡ್ಡದು ಮಾಡಿದೆ.

Ad
Ad
Nk Channel Final 21 09 2023