ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ, ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಪ್ರಯಾಣಿಕರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

