ಯೋಗಿ ಆದಿತ್ಯನಾಥ್‌ ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮರು ಮೈತ್ರಿ ಘೋಷಣೆಯಾಗಿ ಹಲವು ದಿನಗಳು ಕಳೆದಿವೆ. ಲೋಕಸಭೆ ಚುನಾವಣೆ ಪೂರ್ವಭಾವಿಯಾಗಿ ನಿಖಿಲ್‌ ಕುಮಾರಸ್ವಾಮಿ ಭರ್ಜರಿ ತಿರುಗಾಟ ನಡೆಸುತ್ತಿದ್ದಾರೆ. ಇದೀಗ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಭೇಟಿ ವೇಳೆ ನಿಖಿಲ್, ಯೋಗಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಗಿಫ್ಟ್ ಮಾಡಿದ್ದಾರೆ.

ಈ ಬಗ್ಗೆ ಸ್ವತಃ ನಿಖಿಲ್‌ ಹೀಗೆ ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು.

ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ ಎಂದು ಫೇಸ್‌ ಬುಕ್‌ ನಲ್ಲಿ ತಿಳಿಸಿದ್ದಾರೆ.

Ramya Bolantoor

Recent Posts

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

3 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

26 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

30 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

36 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

48 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

54 mins ago