ಬೆಡ್‌ ಇಲ್ಲ ಎಂದ ನಿಮ್ಹಾನ್ಸ್‌ ವೈದ್ಯರು: ಆಸ್ಪತ್ರೆ ಆವರಣದಲ್ಲಿಯೇ ಮಗು ಸಾವು

ಬೆಂಗಳೂರು: ತಲೆಗೆ ಗಾಯವಾಗಿದ್ದ ಮಗುವಿಗೆ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲ ಎಂದು ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದ್ದು, ಆಸ್ಪತ್ರೆ ಆಡಳಿತ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ.

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಮೃತ ಮಗುವಿಗೆ ತಲೆಗೆ ಪೆಟ್ಟಾಗಿದ್ದು, ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಅದರಂತೆ ಹಾಸನದಿಂದ ಬೆಂಗಳೂರಿನವರೆಗೆ 224 ಕಿಮೀ ‘ಗ್ರೀನ್ ಕಾರಿಡಾರ್’ ವ್ಯವಸ್ಥೆ ಮಾಡಲಾಗಿತ್ತು. ಆಂಬ್ಯುಲೆನ್ಸ್ ಚಾಲಕ ಹಾಸನದಿಂದ ಬೆಂಗಳೂರಿಗೆ 224 ಕಿಮೀ ದೂರವನ್ನು 1 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಿ ನಿಮ್ಹಾನ್ಸ್ ತಲುಪಿದ್ದರು. ಅಲ್ಲದೆ ಹಾಸನದ ವೈದ್ಯರು ನಿಮ್ಹಾನ್ಸ್‌ನ ಆಡಳಿತ ಘಟಕಕ್ಕೆ ಕರೆ ಮಾಡಿ ಮಗುವಿನ ತುರ್ತು ಚಿಕಿತ್ಸಾ ಅಗತ್ಯಗಳ ಬಗ್ಗೆ ತಿಳಿಸಿದ್ದರು. ಆದರೆ, ನಿಮ್ಹಾನ್ಸ್ ಅಧಿಕಾರಿಗಳು ಬೆಡ್ ಇಲ್ಲ ಎಂದು ಪೋಷಕರಿಗೆ ತಿಳಿಸಿದ್ದಾರೆ. ಹಾಸಿಗೆ ಕೊಡಿಸಿ ಚಿಕಿತ್ಸೆ ಆರಂಭಿಸುವಂತೆ ಪೋಷಕರು ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಪೋಷಕರು ಆರೋಪಿಸಿದ್ದು, ಕೊನೆಗೆ ಮಗು ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕನ ಸಾವಿಗೆ ಕಾರಣವಾದ ತುರ್ತು ಪರಿಸ್ಥಿತಿಯ ಬಗ್ಗೆ ನಿಮ್ಹಾನ್ಸ್ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿಮ್ಹಾನ್ಸ್‌ನಲ್ಲಿ ದಟ್ಟಣೆ ಹೆಚ್ಚಿದೆ. ವೈದ್ಯರು ಒತ್ತಡದ ನಡುವೆಯೂ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ. ನಾನು ಮಗುವಿನ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago