News Karnataka Kannada
Saturday, May 18 2024
ಬೆಂಗಳೂರು

ಹೆಚ್ಎಸ್ಆರ್​ಪಿ ನೇಮ್ ಬೋರ್ಡ್ ಇಲ್ಲಾಂದ್ರೆ ದಂಡ ಗ್ಯಾರಂಟಿ

ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್ಎಸ್ಆರ್​ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ.  ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ.
Photo Credit : News Kannada

ಬೆಂಗಳೂರು: ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್ಎಸ್ಆರ್​ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ.  ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ.

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ಗಳನ್ನು (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರಿಲ್ಲ.  ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 16 ದಿನಗಳಷ್ಟೇ ಬಾಕಿ ಉಳಿದಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು