ಬೆಂಗಳೂರು

ಬೆಂಗಳೂರು: ಆರ್‌ಎಸ್‌ಎಸ್‌ ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸೇರಿದಂತೆ ಹಿಂದು ಸಂಘಟನೆಗಳ ನಿಷೇಧ ಕುರಿತು ಸರ್ಕಾರ ಯೂ ಟರ್ನ್‌ ಹೊಡೆದಿದೆ. ಈ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಆರ್‌ಎಸ್‌ಎಸ್‌ ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತರುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಕಾಂಗ್ರೆಸ್‌ ಪಕ್ಷ ಎಂದೂ ಮಾತನಾಡಿಲ್ಲ ಎಂದರು.

ಕಳೆದ ವಾರ ಆರ್‌ಎಸ್‌ಎಸ್‌ ನಿಷೇಧಿಸುವ ಕುರಿತು ಸಚಿವ ಪ್ರಿಯಾಂಕ್‌ ನೀಡಿದ್ದ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದಿದೆ.

ಮೊನ್ನೆಯಷ್ಟೆ ಹೇಳಿಕೆ ನೀಡಿದ್ದ ಸಚಿವ ಖರ್ಗೆ ಬಜರಂಗದಳ, ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಸಂಘಟನೆಗಳು ನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗಿದರೆ ನಾವು ನಿಷೇಧ ವಿಧಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದರು. ಅಲ್ಲದೆ ಬಿಜೆಪಿ ಸರ್ಕಾರ ಜಾರಿಗೆ ತಂದ ಹಲವು ಕಾನೂನುಗಳನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago