ಸಿಎಂ ಅನುಮತಿಯಿಲ್ಲದೆ ವರ್ಗಾವಣೆಯಿಲ್ಲ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಪ್ರಮುಖ ಕ್ರಮವೊಂದನ್ನು ಕೈಗೊಂಡಿದ್ದು ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡುವುದಾದರೆ ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯವಾಗಿದೆ.

ಒಂದು ವೇಳೆ ಮುಖ್ಯಮಂತ್ರಿಯವರ ಪೂರ್ವಾನುಮತಿ ಪಡೆಯದೆ ವರ್ಗಾವಣೆ ಮಾಡಿದ್ದು ಕಂಡುಬಂದಲ್ಲಿ ಸರಕಾರದ ಸಂಬಂಧಪಟ್ಟ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು. ಹಾಗೆಯೇ ಸಂಬಂಧಿಸಿದ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

2023-24ರ ಸಾಲಿನಲ್ಲಿ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ಸಿಬಂದಿಯಲ್ಲಿ ಆಯಾ ಜೇಷ್ಠತಾ ಘಟಕದ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಮಾಡಲು ಜೂ. 1ರಿಂದ ಜು. 3ರ ವರೆಗೆ ಇಲಾಖಾ ಸಚಿವರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಅವಧಿ ಮುಕ್ತಾಯಗೊಂಡ ಬಳಿಕವೂ ಇಲಾಖಾ ಹಂತದಲ್ಲಿ ವರ್ಗಾವಣೆ ಕೈಗೊಂಡು ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುತ್ತಿರುವ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Ashika S

Recent Posts

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

15 mins ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

43 mins ago

ಮೈಸೂರಿನಲ್ಲಿ ವೆಸ್ಟ್ ನೈಲ್ ಜ್ವರದ ಭೀತಿ : ಗಡಿಭಾಗದಲ್ಲಿ ಹೈ ಅಲರ್ಟ್!

ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್‍ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…

58 mins ago

ಡಾಲಿ ನಟನೆಯ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ

ಡಾಲಿ ಧನಂಜಯ್‌ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…

2 hours ago

ನಾಮಪತ್ರ ಸಲ್ಲಿಸಲು ‘ಚಟ್ಟ’ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…

2 hours ago

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

2 hours ago