ಉತ್ತಮ ಸಮಾಜ ನಿರ್ಮಾಣದಲ್ಲಿ ಎನ್ ಎಸ್ ಎಸ್ ಪಾತ್ರ ಅಪಾರ: ಡಾ. ಕೆ. ಸಿ ನಾರಾಯಣಗೌಡ

ಬೆಂಗಳೂರು: ರಾಜ್ಯದಲ್ಲಿ 56 ವಿಶ್ವವಿದ್ಯಾಲಯ ಕಾಲೇಜು ಹಾಗೂ 4 ನಿರ್ದೇಶನಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ರಾಜ್ಯದಲ್ಲಿ 5 ಲಕ್ಷ ಸ್ವಯಂ ಸೇವಕ, ಸೇವಕಿಯರು ನೋಂದಾಯಿಸಿಕೊಂಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ. ಸಿ ನಾರಾಯಣಗೌಡ  ಅವರು  ಹೇಳಿದರು.

ವಿಕಾಸೌಧದ ಸಭಾಂಗಣದಲ್ಲಿ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇವರ ವತಿಯಿಂದ  ಆಯೋಜಿಸಿದ್ದ ಸಲಹಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, 2021-22ರ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಕುರಿತು 2022-23 ರ ಸಲಹಾ ಸಮಿತಿಯಲ್ಲಿ ಗಾಂಧೀಜಿಯವರ ತತ್ವಗಳನ್ನು ಪಾಲಿಸುತ್ತಾ ಎನ್.ಎಸ್.ಎಸ್‌ ಅಭಿವೃದ್ಧಿಯಲ್ಲಿ ಕರ್ನಾಟಕವು ಭಾರತದಲ್ಲೇ ಒಂದನೇ ಸ್ಥಾನಕ್ಕೆ ತಲುಪಿದೆ. ಎನ್.ಎಸ್.ಎಸ್‌ ಇನ್ನಷ್ಟು ಸೇವೆಗಳ ಮೂಲಕ ಅಭಿವೃದ್ಧಿಯತ್ತ ಸಾಗಲಿ  ಎಂದು ಸಚಿವರು ಆಶಿಸಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.  ಶಾಲಿನಿ ರಜನೀಶ್ ಅವರು ಮಾತನಾಡಿ,”ಸಮಾಜದ ಅಗತ್ಯತೆಗಳನ್ನು  ಗರುತಿಸಿ, ಜೀವನ ಕೌಶಲ್ಯಗಳ ತರಬೇತಿಯನ್ನು ನೀಡುವುದು ಅತ್ಯಗತ್ಯ”. ಎಂದರು.

ಕಾನೂನು ನೆರವಿನ ಕುರಿತು ಮಾತನಾಡಿ, “ಜನರಲ್ಲಿ ಕಾನೂನು ನೆರವಿನ ಕುರಿತು ಇನ್ನಷ್ಟು ಹೆಚ್ಚು ಜಾಗೃತಿ ಮೂಡಿಸಬೇಕು. ಕಾನೂನು ನೆರವಿನʼ ಬಗ್ಗೆಯು ಎನ್.ಎಸ್.ಎಸ್‌ ವಿದ್ಯಾರ್ಥಿಗಳ ಸಹಾಯದಿಂದ ಜಾಗೃತಿ ಮೂಡಿಸಬಹುದು. ಈ ಮೂಲಕ ನಮ್ಮ ಸಮಾಜದಲ್ಲಿ ಹೆಚ್ಚಿನ ಶಾಂತಿಯನ್ನು ಕಾಪಾಡಬಹುದು. ಎಂದು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಪ್ರತೀ ವಿಭಾಗದಲ್ಲು ಒಬ್ಬ ಸಂಪನ್ಮೂಲ  ವ್ಯಕ್ತಿಯನ್ನು ನೇಮಿಸಬೇಕು. ಸ್ವಸಹಾಯ ಸಂಘಗಳಿಗೆ, ಶಿಕ್ಷಣ ಸಂಸ್ಥೆಗಳಿಂದ ತಂತ್ರಜ್ಞಾನ ಮಾಹಿತಿ ವರ್ಗಾವಣೆ ಆಗಬೇಕು. ಆಧುನಿಕ ಯುಗವು ಸ್ಪರ್ಧಾತ್ಮಕ ಯುಗವಾದ್ದರಿಂದ ನಾವೀನ್ಯತೆಯನ್ನು ಹೊರತರಲು ಹೆಚ್ಚಿನ ಒತ್ತನ್ನು ನೀಡಬೇಕು. ಎಲ್ಲಾ ವಿಶ್ವವಿದ್ಯಾಲಯಗಳು ಯುವ ಸ್ಪಂದನ ಯೋಜನೆಗೆ ಬೆಂಬಲಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಎನ್‌.ಎಸ್‌.ಎಸ್ ಅಧಿಕಾರಿಗಳಾದ ಪ್ರತಾಪ್‌ ಲಿಂಗಯ್ಯ, ಎ‌ನ್‌.ಎಸ್‌.ಎಸ್ ಪ್ರಾಂತೀಯ ಕೇಂದ್ರದ ನಿರ್ದೇಶಕರಾದ ಖಾದ್ರಿ ನರಸಿಂಹಯ್ಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಗೋಪಾಲ್‌ ಕೃಷ್ಣ ವಿಭಾಗ ಮುಖ್ಯಸ್ಥರು ಮುಂತಾದವರು ಉಪಸ್ಥಿತರಿದ್ದರು.

Ashika S

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

30 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

33 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

56 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago