Bengaluru 27°C
Ad

ಪ್ರಧಾನಿ ಮೋದಿ ಮೈಸೂರಿಗೆ ಬಂದಾಗ ನಡೆಸಿದ್ದ ಆತಿಥ್ಯದ ವೆಚ್ಚ ಎನ್​​ಟಿಸಿಎ ನೀಡಿಲ್ಲ

2023ರ ಏಪ್ರಿಲ್​ನಲ್ಲಿ ಎನ್​​ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಆಯೋಜಿಸಿದ್ದ ಹುಲಿ ಯೋಜನೆ - 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: 2023ರ ಏಪ್ರಿಲ್​ನಲ್ಲಿ ಎನ್​​ಟಿಸಿಎ (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಆಯೋಜಿಸಿದ್ದ ಹುಲಿ ಯೋಜನೆ – 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ 3.33.ಕೋಟಿ ರೂ ಸೇರಿದಂತೆ 80 ಲಕ್ಷ ರೂ ಬಿಲ್ ಬಾಕಿ ಇದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ  ಹೇಳಿದ್ದಾರೆ.

Ad

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ಸಮಿತಿಯನ್ನು ರಚಿಸಲಾಗಿತ್ತು,  ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್​​ಟಿಸಿಎ ಹೇಳಿತ್ತು ಎಂದು ಖಂಡ್ರೆ ವಿವರಿಸಿದರು.

Ad

ಈ ಕಾರ್ಯಕ್ರಮ ನಡೆದಾಗ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್​​ಟಿಸಿಎ ಕಾರ್ಯಕ್ರಮವಾಗಿತ್ತು ಎಂದಿದ್ದಾರೆ.

Ad

ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಒಟ್ಟು 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಅವರು ಹೇಳಿದ್ದಾರೆ.

Ad

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್​​ಟಿಸಿಎ ಈ ಬಾಕಿ ಹಣ ನೀಡಿಲ್ಲ.

Ad
Ad
Ad
Nk Channel Final 21 09 2023