News Karnataka Kannada
Sunday, April 28 2024
ಬೆಂಗಳೂರು

ಪಾಕಿಸ್ತಾನದ ಪರ ಘೋಷಣೆ: ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ

ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.
Photo Credit : News Kannada

ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

ಈ ವೇಳೆ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ತುಂಬಿಸಿ ಕರೆದೊಯ್ದಿದು, ಮೈಸೂರು ರಸ್ತೆ ಸಿಎಆರ್ ಮೈದಾನದಲ್ಲಿ ಕೂಡಿ ಇಡಲಾಗಿತ್ತು.

ಇದರಿಂದ ರೊಚ್ಚಿಗೆದ್ದ ಬಿಜೆಪಿ ನಾಯಕರು ಸಿಎಆರ್ ಮೈದಾನದಲ್ಲೇ ಕೂತು ಪ್ರತಿಭಟನೆ ಮುಂದುವರಿಸಿದರು. ನಮ್ಮನ್ನು ಕತ್ತಲೆಯಲ್ಲಿ ತಂದು ಕೂರಿಸಿದ್ದಾರೆಂದು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು