ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ, ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.
ಆರೋಪಿ ಆದರ್ಶ್ ಕುಮಾರ್ ಸಿಂಗ್ ಎಂಬಾತ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ. ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಯಾಕೆ ವಾಪಸ್ ತೆರಳುತ್ತಿದ್ದೀರಿ ಎಂದು ಏರ್ಪೋರ್ಟ್ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ.
ಸದ್ಯ ಆರೋಪಿ ಕೆಂಪೇಗೌಡ ಏರ್ಪೋರ್ಟ್ ಠಾಣೆ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಕೆಂಪೇಗೌಡ ಏರ್ಪೋರ್ಟ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…