Ad

ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. 

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
300x250 2

ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ, ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಕೆಲವೇ ಕ್ಷಣಗಳ ಹಿಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾ ಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad