ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರವನ್ನು ಸೋಲಿಸಿದ ಜನರು- ರಾಹುಲ್‌ ಗಾಂಧಿ

ಬೆಂಗಳೂರು: ಕರ್ನಾಟಕದ ಜನರು ಬಿಜೆಪಿಯ ದ್ವೇಷ ಮತ್ತು ಹಣ ಬಲವನ್ನು ಸೋಲಿಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಪಕ್ಷ ಅಧಿಕಾರಕ್ಕೆ ಬರಲು ಸಹಕರಿಸಿದ ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದರು.

ಜನರು ಕಾಂಗ್ರೆಸ್‌ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್‌ ಯಾವ ಆಧಾರದಲ್ಲಿ ಚುನಾವಣೆಯಲ್ಲಿ ಜಯ ಪಡೆಯಿತು ಎಂಬ ಅನೇಕ ವರದಿಗಳು ಬಂದಿವೆ. ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದರು.

“ನಾವು ಸತ್ಯ ಪರವಾಗಿದ್ದೆವು. ಬಿಜೆಪಿಗೆ ಹಣ, ಅಧಿಕಾರ ಮತ್ತು ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ಅಸತ್ಯದ ತಳಹದಿಯ ಜನರನ್ನು ಸೋಲಿಸಿದ್ದಾರೆ ಎಂದರು.

ಬಿಜೆಪಿ ಭ್ರಷ್ಟಾಚಾರವನ್ನು ಜನರು ಸೋಲಿಸಿದರು. ದ್ವೇಷದ ವಾತಾವರಣವನ್ನು ಅವರು ಸೋಲಿಸಿದರು. ದ್ವೇಷದ ಮಾರುಕಟ್ಟೆಯಲ್ಲಿ ನಾವು ಹಲವಾರು ತೆರೆದಿದ್ದೇವೆ. ಪ್ರೀತಿಯ ಅಂಗಡಿಗಳನ್ನು ತೆರೆದಿದ್ದೇವೆ ಎಂದರು. ಪಕ್ಷ ಘೋಷಿಸಿದ ಐದು ಭರವಸೆಗಳನ್ನು ಈಡೇರಿಸಲಾಗುವುದು ಎಂದು ರಾಹುಲ್ ಗಾಂಧಿ ಜನರಿಗೆ ಭರವಸೆ ನೀಡಿದರು.

Ashika S

Recent Posts

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

20 mins ago

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌…

44 mins ago

ಪ್ರಜ್ವಲ್ ನನ್ನು ದೇಶದಿಂದ ಆಚೆ ಬಿಟ್ಟು ನಮ್ಮಂತವರ ಬಂಧನ ಎಂದ ಕೆ. ಕವಿತಾ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ…

1 hour ago

‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…

1 hour ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

1 hour ago

100 ವರ್ಷ ತುಂಬಿದ ಅಜ್ಜನಿಗೆ ಹುಟ್ಟುಹಬ್ಬದ ಸಂಭ್ರಮ

೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…

2 hours ago