News Karnataka Kannada
Saturday, May 11 2024
ಬೆಂಗಳೂರು

ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಸಿಎಂ, ಜಮೀರ್‌ ವಿರುದ್ಧ ಬಿಜೆಪಿ ಟೀಕೆ

New Project 2023 12 22t152301.765
Photo Credit : News Kannada

ಬೆಂಗಳೂರು: ಬರದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಚಿವ ಜಮೀರ್ ಅಹಮದ್, ಕೃಷ್ಣಬೈರೇಗೌಡ ಐಷಾರಾಮಿ ವಿಮಾನ ಪ್ರಯಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಅವರು, ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆಯಂತೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ಮಾಡಿರುವ ವಿಜಯೇಂದ್ರ ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂತಹ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವುದು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದಿದ್ದಾರೆ.

 

https://twitter.com/BZZameerAhmedK/status/1737727391450173574?ref_src=twsrc%5Etfw%7Ctwcamp%5Etweetembed%7Ctwterm%5E1738014296410636420%7Ctwgr%5E82882c3597cad27da1e6cc00f4799feaef9a2bbd%7Ctwcon%5Es3_&ref_url=https%3A%2F%2Fpublictv.in%2Fby-vijayendra-criticizes-cm-siddaramaiah-and-zameer-for-luxury-air-travel%2F

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು