News Karnataka Kannada
Friday, May 03 2024
ಬೆಂಗಳೂರು

ಇಂದು ಬೆಂಗಳೂರಿಗೆ ಪ್ರಧಾನಿ: ನಗರದಲ್ಲಿ ಪೊಲೀಸರು ಬಂದೋಬಸ್ತ್

ಲೋಕಸಭೆ ಚುನಾವಣೆ  ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿನ ಅರಮನೆಗೆ ಮೈದಾನಕ್ಕೆ  ಪ್ರಧಾನಿ ನರೇಂದ್ರ ಮೋದಿ  ಆಗಮಿಸಲಿದ್ದಾರೆ. ಮೋದಿ ನಗರ ಭೇಟಿಯ ವೇಳೆ ಅಹಿತಕರ ಘಟನೆ ಆಗದಂತೆ ನಗರ ಪೊಲೀಸರು ಬಂದೋಬಸ್ತ್ ಮಾಡಿಕೊಂಡಿದ್ದಾರೆ.
Photo Credit : NewsKarnataka

ಬೆಂಗಳೂರು: ಲೋಕಸಭೆ ಚುನಾವಣೆ  ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿನ ಅರಮನೆಗೆ ಮೈದಾನಕ್ಕೆ  ಪ್ರಧಾನಿ ನರೇಂದ್ರ ಮೋದಿ  ಆಗಮಿಸಲಿದ್ದಾರೆ. ಮೋದಿ ನಗರ ಭೇಟಿಯ ವೇಳೆ ಅಹಿತಕರ ಘಟನೆ ಆಗದಂತೆ ನಗರ ಪೊಲೀಸರು ಬಂದೋಬಸ್ತ್ ಮಾಡಿಕೊಂಡಿದ್ದಾರೆ.

ಬಂದೋಬಸ್ತ್​​ಗಾಗಿ‌ ಎರಡು ಸಾವಿರ ಪೊಲೀಸರ ನಿಯೋಜನೆ ಮಾಡಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಭದ್ರತೆ ನಿಯೋಜನೆಗೊಂಡಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್, ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ‌‌‌.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಮೇಕ್ರಿ ಸರ್ಕಲ್‌ನಲ್ಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಸರ್ಕಲ್‌ನಲ್ಲಿ ಹೆಚ್ಚುವರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೇಕ್ರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶವಿಲ್ಲ.

ಪ್ರಚಾರ ಕಾರ್ಯಕ್ರಮದ ಸಲುವಾಗಿ  ಹಲವಾರು ಪ್ರಮುಖ ರಸ್ತೆಗಳ ಸಂಚಾರ ಬದಲಾವಣೆ  ಮಾಡಲಾಗಿದೆ. ಸಾರ್ವಜನಿಕರು ಇದನ್ನು ಗಮನಿಸುವಂತೆ ಟ್ರಾಫಿಕ್‌ ಇಲಾಖೆ ಸೂಚಿಸಿದೆ. ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ರಸ್ತೆ ಮಾರ್ಗವಾಗಿ ಮೋದಿ ಹೆಚ್.ಎ .ಎಲ್. ತಲುಪಲಿರುವರು.

ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಕ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ.

ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧವಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸರಕು ಸಾಗಣೆ ವಾಹನಗಳಕ್ಕೆ ನಿರ್ಬಂಧ ಹೇರಲಾಗಿದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ.

ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ಸೂಚನೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು