ಭೋಪಾಲ್: ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ ಏಕಕಾಲದಲ್ಲಿ5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದ್ದಾರೆ.
ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಮೂರು ರೈಲುಗಳಾದ ರಾಂಚಿ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್, ಮತ್ತು ಗೋವಾ (ಮಡ್ಗಾಂವ್)-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ಗೂ ಚಾಲನೆ ನೀಡಿದರು. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.