News Karnataka Kannada
Thursday, May 16 2024
ಬೆಂಗಳೂರು

ಮೋದಿಗೆ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗೆ ತೊಂದ್ರೆ: ಸಿಎಂ ಸಿದ್ದು ಟೀಕೆ

Photo Credit : News Kannada

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಆಗಾಗ ಹರಿಹಾಯುವ ಸಿಎಂ ಸಿದ್ದರಾಮಯ್ಯ ಅವರು, ಇದೀಗ ಎಕ್ಸ್‌ನಲ್ಲಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯದ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಹಲವು ಪೋಸ್ಟರ್ ಗಳನ್ನು ಹಂಚಿಕೊಳ್ಳುವ ಮೂಲಕ ಸಿಎಂ ಅವರು ಪ್ರಧಾನಿ ಅವರನ್ನು ಎಕ್ಸ್‌ ನಲ್ಲಿ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ, ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದಿದ್ದಾರೆ. ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿ ಸದಾ ಪಲಾಯನ ಮಾಡುತ್ತಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸರಿಯಾಗಿ ಅನುದಾನ ಬರುತ್ತಿಲ್ಲ. ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕೇಂದ್ರ ಸರ್ಕಾರ ಕಿಂಚಿತ್ತು ಬೆಲೆ ನೀಡುತ್ತಿಲ್ಲ. ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮೋದಿ ಮಂತ್ರವಿಷ್ಟೇ, ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು. ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು! ಎಂದು ಬರೆದುಕೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು