Bengaluru 24°C
Ad

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೂಂಜ ಮನೆಗೆ ಬಂದ ಪೊಲೀಸರು !

Harish

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೂಂಜ ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಆಗಮಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲ ನಿವಾಸದಲ್ಲಿರುವ ಹರೀಶ್ ಪೂಂಜ ಮನೆಗೆ ಖಾಕಿ ಎಂಟ್ರಿ ಆಗಿದೆ.

ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆಯಲ್ಲಿ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ. ಪೊಲೀಸರ ಜೊತೆ ವಕೀಲರ ತಂಡದಿಂದ ಮಾತುಕತೆ ನಡೆಯುತ್ತಿದೆ.

ಇನ್ನು ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ.
ಸದ್ಯ ಪೊಲೀಸರು ಹಾಗು ಕಾರ್ಯಕರ್ತರ ನಡುವಿನ ಹೈ ಡ್ರಾಮಕ್ಕೆ ಪೂಂಜ ನಿವಾಸ ಸಾಕ್ಷಿಯಾಗುತ್ತಿದೆ. ಪೂಂಜ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಯಿಸುತ್ತಿದ್ದಾರೆ.

ಇನ್ನು ಬಿಜೆಪಿ ಮುಖಂಡರೊಬ್ಬರನ್ನು ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧನ ಮಾಡಿರುವುದನ್ನು ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮಂಗಳವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಬಂಧಿತ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಎಂದು ಈ ಪ್ರತಿಭಟನಾ ಸಭೆಯಲ್ಲಿ ಹರೀಶ್‌ ಪೂಂಜ ಹೇಳಿದ್ದಾರೆ. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್‌ಗೆ, ಇತರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ಸಲುವಾಗಿ ತಾಲ್ಲೂಕು ಕಚೇರಿಗೆ ಹೋಗದಂತೆ ತಡೆ ಒಡ್ಡಿದ್ದಾರೆ. ಈ ಅಂಶಗಳು ಎಫ್‌ಐಆರ್‌ನಲ್ಲಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad