News Karnataka Kannada
Monday, May 13 2024
ಬೆಂಗಳೂರು

74 ಭ್ರೂಣ ಹತ್ಯೆ ಕೇಸ್: ‘ಆಸರೆ ‘ಆಸ್ಪತ್ರೆಗೆ ಬೀಗ ಜಡಿದ ಪೊಲೀಸರು

ನಗರದ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವ ಹಿನ್ನೆಲೆ ಆಸ್ಪತ್ರೆಯನ್ನು ಪೊಲೀಸರು ತಾತ್ಕಾಲಿಕವಾಗಿ ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.
Photo Credit : News Kannada

ಬೆಂಗಳೂರು : ನಗರದ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವ ಹಿನ್ನೆಲೆ ಆಸ್ಪತ್ರೆಯನ್ನು ಪೊಲೀಸರು ತಾತ್ಕಾಲಿಕವಾಗಿ ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಗ್ರಾಮಾತರ ಜಿಲ್ಲೆಯ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧವಿದ್ದರೂ ಈ ಆಸ್ಪತ್ರೆಯ ವೈದ್ಯರು 74 ಭ್ರೂಣ ಹತ್ಯೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರವಿಕುಮಾರ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿದಾಗ ಭ್ರೂಣ ಹತ್ಯೆ ದಂಧೆ ನಡೆಸಿರುವುದು ಬಯಲಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಡಾ. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು