Bengaluru 21°C
Ad

ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ : ಜಡ್ಜ್ ಮುಂದು ಪವಿತ್ರಾ ಗೌಡ ಕಣ್ಣೀರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತವರ ಗ್ಯಾಂಗ್‌ ಅನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ನಟ ದರ್ಶನ್‌ ಸೇರಿ ಇತರ ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು.

ಬೆಂಗಳೂರು:   ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತವರ ಗ್ಯಾಂಗ್‌ ಅನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ನಟ ದರ್ಶನ್‌ ಸೇರಿ ಇತರ ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಕೇಸ್‌ನ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ಬೆಂಗಳೂರು, ಚಿತ್ರದುರ್ಗದಲ್ಲಿ ಮಹಜರು ನಡೆದಿದೆ, ಆದರೆ, ಮೈಸೂರಿನಲ್ಲಿ ಮಹಜರು ಬಾಕಿ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಕೋರ್ಟ್‌ಗೆ ಆರೋಪಿಗಳು ಹಾಜರಾದ ಮೇಲೆ ಜಡ್ಜ್ ಮೊದಲಿಗೆ ನಟ ದರ್ಶನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಕಸ್ಟಡಿಯಲ್ಲಿ ತೊಂದರೆ ಆಯ್ತಾ ಎಂದು ಕೇಳಿದ್ದಕ್ಕೆ ದರ್ಶನ್ ಅವರು ಇಲ್ಲ ಎಂದು ಉತ್ತರಿಸಿದ್ದಾರೆ.

ಇದೇ ವೇಳೆ ಪವಿತ್ರಾ ಗೌಡ ಅವರಿಗೂ ಕಸ್ಟಡಿಯಲ್ಲಿ ನಿಮಗೆ ತೊಂದರೆ ಏನಾದರೂ ಆಯ್ತಾ ಎಂದು ಕೇಳಿದ್ದಾರೆ. ಆಗ ಪವಿತ್ರಾ ಅವರು ಅಂತಹದ್ದು ಏನು ಇಲ್ಲ ಎಂದು ಉತ್ತರಿಸಿದ್ದಾರೆ. ನ್ಯಾಯಾಧೀಶರು ಪ್ರಶ್ನೆ ಕೇಳುವಾಗ ಪವಿತ್ರಾ ಗೌಡ ಅವರು ಕಣ್ಣೀರು ಹಾಕಿದ್ದಾರೆ

Ad
Ad
Nk Channel Final 21 09 2023
Ad