Ad

ಇಂದು ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಪೊಲೀಸ್ ಕಸ್ಟಡಿ ಅಂತ್ಯ

Das

ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಟ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ಎಲ್ಲಾ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Ad
300x250 2

ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ಯ್ಯಾಪ್ ಮಾಡಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಹೀಗಾಗಿ ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧಿಸಿದ್ದು ಸಾಕಷ್ಟು ಮಾಹಿತಿಯನ್ನು ಕಲೆ ಹಾಕಲಾಗಿದೆ.ಇಂದು ಎರಡನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರಿಪಡಿಸಲಿದ್ದಾರೆ.

ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.

Ad
Ad
Nk Channel Final 21 09 2023
Ad