News Karnataka Kannada
Wednesday, April 17 2024
Cricket
ಬೆಂಗಳೂರು

ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ : ಸಿಎಂ

Cm
Photo Credit : News Kannada

ಬೆಂಗಳೂರು: ಕ್ರೀಡಾಪಟುಗಳನ್ನು ಪೊಲೀಸ್ ಇಲಾಖೆಯ ಸೇವೆಗಾಗಿ ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರ ಕ್ರೀಡಾಪಟುಗಳಿಗೆ ಇಲಾಖೆಯ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿಯನ್ನುಒದಗಿಸಲು ನಿರ್ಧರಿಸಿದ್ದು, ಭವಿಷ್ಯದಲ್ಲಿ ಈ ಮೀಸಲಾತಿಯನ್ನು ಹೆಚ್ಚಿಸಲು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಫೆ.04ರಂದು ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ 12ನೇ ಅಖಿಲ ಭಾರತ ಪೊಲೀಸ್ ಆರ್ಚರಿ ಚಾಂಪಿಯನ್ ಶಿಪ್ ನ ಸಮಾರೋಪ ಸಮಾರಂಭ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸ್ ದಳ ಹಾಗೂ ಕೇಂದ್ರ ಪೊಲೀಸ್ ಸಂಸ್ಥೆಗಳ 24 ತಂಡಗಳು ಭಾಗವಹಿಸಿರುವುದು ಅತ್ಯಂತ ಸಂತೋಷದ ವಿಚಾರ ಎಂದರು.

2022-23ನೆ ಸಾಲಿನಲ್ಲಿ, 80 ಸಿವಿಲ್ ಪೇದೆಗಳು ಹಾಗೂ 20 ಪಿಎಸ್ ಐಗಳನ್ನು ಕ್ರೀಡೆ ಕೋಟಾದಡಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದ ಅವರು, ಬಿಲ್ವಿಧ್ಯೆ, ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಈ ವಿದ್ಯೆಯಲ್ಲಿ ಶ್ರೇಷ್ಠತೆಯನ್ನು ಸಾಧಿಸಿದ್ದ ಏಕಲವ್ಯ, ಅರ್ಜುನ, ಕರ್ಣ, ದ್ರೋಣಾಚಾರ್ಯರ ಕೊಡುಗೆಯನ್ನು ಮರೆಯುವಂತಿಲ್ಲ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಅಲೋಕ್ ಮೋಹನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು