ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ; ಕೇರಳ ಪೊಲೀಸ್ ಅಧಿಕಾರಿಗಳು ಭಾಗಿ

ಬೆಂಗಳೂರು: ಏಪ್ರಿಲ್ 26ರಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಹಾಸನ ಮೈಸೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಗಡಿ ಭಾಗಗಳಲ್ಲಿನ ಪ್ರದೇಶದ ಕಾನೂನು ಹಾಗೂ ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳು, ಸಾಮಾಜಿಕ ವಿರೋಧಿ ಅಂಶಗಳು, ಕೋಮುಗಲಭೆ, ರೌಡಿ ಆಸಾಮಿಗಳ ಮೇಲೆ ನಿಗಾ ಇಡುವುದು, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ, ಪರಸ್ಪರ ವಿಷಯದ ಕುರಿತು ಚರ್ಚಿಸಿ ಮಾಹಿತಿಯನ್ನು ವಿನಿಮಯ ಹಾಗೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಸಲುವಾಗಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಇಂದು ಮಾರ್ಚ್ 29ರಂದು ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಅಂತರ್ ರಾಜ್ಯ ಗಡಿ ಜಿಲ್ಲ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳ ಸಭೆಯು ಜರುಗಿದೆ.

ವಿರಾಜಪೇಟೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗ ಹೊಂದಿಕೊಂಡಿರುವ ಕೊಡಗು ಹಾಗೂ ಕೇರಳ ರಾಜ್ಯದ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಕೂಡ ಪಾಲ್ಕೊಂಡು ಹಲವು ಮುಂಜಾಗ್ರತಾ ಕ್ರಮದ ಬಗ್ಗೆ ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಸೋಮವಾರಪೇಟೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗ ಹೊಂದಿಕೊಂಡಿರುವ ಕೊಡಗು, ಮೈಸೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಭೆ ಸೇರಿ ಚರ್ಚಿಸಿದರು.

ವಿರಾಜಪೇಟೆಯಲ್ಲಿ ನಡೆದ ಸಭೆಯಲ್ಲಿ ಕೇರಳ ರಾಜ್ಯದ ಇರಿಟಿ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಯೋಗೀಶ್ ಮಂಡಯ್ಯ, ಮಾನಂದವಾಡಿ ಡಿ ಎಸ್ ಪಿ, ಪಿ ಬ್ರಿಜೇಶ್, ವಿರಾಜಪೇಟೆ ಡಿ.ವೈ ಎಸ್. ಪಿ ಆರ್ ಮೋಹನ್ ಕುಮಾರ್ ಹಾಗೂ ಗಡಿ ಭಾಗದ ಕೊಡಗು ಹಾಗೂ ಕೇರಳದ ಇತರ 15 ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸೋಮವಾರಪೇಟೆಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್, ಅಧೀಕ್ಷಕರಾದ ಸುಂದರರಾಜ್ ಕೆ.ಎಸ್, ಸೋಮವಾರ ಪೇಟೆ ಡಿವೈಎಸ್ಪಿ ಆರ್ ವಿ ಗಂಗಾಧರಪ್ಪ, ಹೊಳೆನರಸೀಪುರ ಡಿ ವೈ ಎಸ್ ಪಿ ಅಶೋಕ್, ಸಕಲೇಶಪುರ ಡಿವೈಎಸ್ಪಿ ಪ್ರದೀಪ್ ಕುಮಾರ್, ಸೇರಿದಂತೆ ಗಡಿ ಜಿಲ್ಲೆಯ ಇತರ ಏಳು ಪೊಲೀಸ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Maithri S

Recent Posts

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

19 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

3 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago