Bengaluru 27°C
Ad

ಪಿಎಸ್‍ಐ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ: ಪರಮೇಶ್ವರ್

ಪಿಎಸ್‍ಐ ಪರೀಕ್ಷೆಯನ್ನು  ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎಸ್‍ಸಿ ಪರೀಕ್ಷೆ ಹಾಗೂ ಪಿಎಸ್‍ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‍ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು  ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎಸ್‍ಸಿ ಪರೀಕ್ಷೆ ಹಾಗೂ ಪಿಎಸ್‍ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‍ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad

ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೊದಲು ನಿರ್ಧರಿಸಿತ್ತು. ಅದೇ ದಿನ ಯುಪಿಎಸ್‍ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷೆ ಮುಂದೂಡುವಂತೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ಇದರ ಬೆನ್ನಲ್ಲೇ ಪರೀಕ್ಷೆ ಮುಂದೂಡುವುದಿಲ್ಲ ಎಂದು ಪ್ರಾಧಿಕಾರ ಹೇಳಿತ್ತು. ಇದೀಗ ಗೃಹಸಚಿವರು ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.‌

Ad
Ad
Ad
Nk Channel Final 21 09 2023