Bengaluru 29°C
Ad

ಜೂನ್‌ 26ರಂದು ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ?

220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಬೆಂಗಳೂರು: 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಜಯಮಹಲ್ ಎಕ್ಸ್‌ಟೆನ್ಶನ್, ನಂದಿ ದುರ್ಗ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ, ಏರ್‌ಟೆಲ್ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023
Ad