Bengaluru 23°C
Ad

ನಿಜಕ್ಕೂ ಪ್ರದೀಶ್ ಈಶ್ವರ್ ರಾಜೀನಾಮೆ ನೀಡಿದ್ರಾ? ಈ ವೈರಲ್‌ ಪತ್ರದ ಅಸಲಿಯತ್ತೇನು!

ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಕಾಂಗ್ರೆಸ್‌ಗಿಂತ 1 ಮತ ಹೆಚ್ಚು ಬಂದರೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿಕೆ ನೀಡಿದ್ದರು.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಕಾಂಗ್ರೆಸ್‌ಗಿಂತ 1 ಮತ ಹೆಚ್ಚು ಬಂದರೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿಕೆ ನೀಡಿದ್ದರು. ಸದ್ಯ ಫಲಿತಾಂಶ ಬೆನ್ನಲ್ಲೆ ಶಾಸಕರ ಹೆಸರಿನ ರಾಜೀನಾಮೆ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಪತ್ರ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರಲ್ಲಿ ಗೊಂದಲ ಮೂಡಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿಒಂದೇ ಒಂದು ಮತ ಲೀಡ್‌ ಪಡೆದರೂ ನಾನು ರಾಜೀನಾಮೆಗೆ ಸಿದ್ಧ ಎಂದು ಹಲವಾರು ಬಾರಿ ಹೇಳಿದ್ದರು. ಸದ್ಯ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿಒಂದಲ್ಲ20 ಸಾವಿರಕ್ಕೂ ಹೆಚ್ಚು ಮತಗಳ ಲೀಡನ್ನು ಡಾ.ಕೆ.ಸುಧಾಕರ್‌ ಪಡೆದಿದ್ದಾರೆ. ಹೀಗಾಗಿ ಕ್ಷೇತ್ರದ ತುಂಬೆಲ್ಲಾಪ್ರದೀಪ್‌ ಈಶ್ವರ್‌ ರಾಜೀನಾಮೆ ಎಲ್ಲಿಎಂದು ಜನರು ಪ್ರಶ್ನಿಸುತ್ತಿದ್ದಾರೆ. ಆದರೆ ಇದುವರೆಗೂ ಶಾಸಕ ಪ್ರದೀಪ್‌ ಈಶ್ವರ್‌ ಇದಕ್ಕೆ ಪ್ರಕ್ರಿಯೆ ಕೊಟ್ಟಿಲ್ಲ.

Ad
Ad
Nk Channel Final 21 09 2023
Ad